Tuesday 14 April, 2009

ಚಿತ್ರ ೧೦೦



ತವಿಶ್ರೀ:


ಪ್ರತಿಕ್ರಿಯೆಗಳು ಬರಲಿ, ಬರದಿರಲಿ, ಮನ ಮುದುಡಿಸಿಕೊಳ್ಳದೆಯೇ, ವಾರಕ್ಕೊಂದರಂತೆ ಶತಕ ಚಿತ್ರಗಳನ್ನು ಇತ್ತು, ಅನಿಸಿಕೆಗಳನ್ನು ಮೂಡಿಸಲು ಹಲವು ಮನಗಳಿಗೆ ಅನುವು ಮಾಡಿ ಕೊಟ್ಟ ಅಮರ, ಶ್ರೀ ಮತ್ತು ಶ್ರೀನಿಧಿಯವರುಗಳಿಗೆ ಮನಃಪೂರ್ವಕ ಕೃತಜ್ಞತೆಗಳು ಹಾಗೂ ಅಭಿನಂದನೆಗಳು

ಸ್ವಹಿತದೆಡೆಗೇ ಮನ ಮತ್ತೆ ವಸಂತನಾಗಮನ
ಮತ್ತೆ ಮತ್ತೆ ತರು ಲತೆಗಳಲಿ ನವ ಚೇತನ
ನೇಸರನ ತೀಕ್ಷಣತೆಗೆ ಒತ್ತು ಕೊಡುವ ಕಾಲ
ಬರುತಿದೆ ನೀರಿಗಾಗಿ ಬಾಯಿ ಬಿಡುವ ದಿನ

ಮೇಲೇರುತಿದೆ ಉರಿ ಬಿಸಿಲು
ಕಾಲ್ಕೆಳಗೆ ಸುಡು ಕಲ್ನಾರು
ಮರ ಒಣಗಿದರೇನು
ಗಿಡ ಚಿಗುರಿದರೇನು

ಇಂದಿನ ಹಸಿವು ತಣಿಸಬೇಕು
ಮಕ್ಕಳ ನಾಳೆ ಸುಗಮವಾಗಿರಿಸಿರಬೇಕು
ಇದೇ ನನ್ನ ಹಂಬಲ
ಇದಕಾಗೇ ನನ್ನ ಚಿಂತನೆ

ಒಮ್ಮೆ ಕೂಗಿದೆ ನಾನು
ಮಗು ಬೀಳುತಿರಲು,
ಅದ ಹಾಡೆಂದರು
ತಾವು ನಲಿದರು :(

ಹಸಿವಲಿ ನರಳಿದೆ
ಅದನರ್ಥ ಮಾಡಿಕೊಳ್ಳದವರು
ಅದನೂ ಹಾಡೆಂದರು
ಕಥೆ ಕವನ ಕಟ್ಟಿದರು

ಕವಿಯಂತೆ ಮನ ಓಡಿಸಿದರು
ಕಪಿಯಂತೆ ಮರದೆಡೆಗೆ ನೋಟವಿಟ್ಟರು
ನನ್ನಿಂದ ಇನ್ನೂ ಹೆಚ್ಚು ಅಪೇಕ್ಷಿಸಿದರು
ಎನ್ನ ತಿಳಿಯದಾದರು
ತಿಳಿಯಲು ಇಚ್ಛೆಯೂ ಇಲ್ಲದವರು
ತಮ್ಮ ಸಂತಸವೇ ಮಿಗಿಲೆಂದವರು

ನನ್ನಳಲು ನನಗೇ ಗೊತ್ತು
ಮೂಢರಿಗೇನು ತಿಳಿದೀತು!
ನನ್ನ ಸ್ನೇಹಿತೆ ಕಾಗೆಯ
ವೈರಿ ಎಂದರು, ಎನ್ನ ಹೊನ್ನಶೂಲಕೇರಿಸಿದರು

ನಿಮಗೇನು ಗೊತ್ತು? ಹೇಗೆ ತಾನೆ ಗೊತ್ತಾಗಬೇಕು
ನಾನೇನೇ ಉಲಿದರೂ ಹಾಡೆಂದು ಅರ್ಥೈಸುವಿರಿ

1 comment:

Unknown said...

ಪ್ರತಿಕ್ರಿಯೆಗಳು ಬರಲಿ, ಬರದಿರಲಿ, ಮನ ಮುದುಡಿಸಿಕೊಳ್ಳದೆಯೇ, ವಾರಕ್ಕೊಂದರಂತೆ ಶತಕ ಚಿತ್ರಗಳನ್ನು ಇತ್ತು, ಅನಿಸಿಕೆಗಳನ್ನು ಮೂಡಿಸಲು ಹಲವು ಮನಗಳಿಗೆ ಅನುವು ಮಾಡಿ ಕೊಟ್ಟ ಅಮರ, ಶ್ರೀ ಮತ್ತು ಶ್ರೀನಿಧಿಯವರುಗಳಿಗೆ ಮನಃಪೂರ್ವಕ ಕೃತಜ್ಞತೆಗಳು ಹಾಗೂ ಅಭಿನಂದನೆಗಳುಸ್ವಹಿತದೆಡೆಗೇ ಮನಮತ್ತೆ ವಸಂತನಾಗಮನ
ಮತ್ತೆ ಮತ್ತೆ ತರು ಲತೆಗಳಲಿ ನವ ಚೇತನ
ನೇಸರನ ತೀಕ್ಷಣತೆಗೆ ಒತ್ತು ಕೊಡುವ ಕಾಲ
ಬರುತಿದೆ ನೀರಿಗಾಗಿ ಬಾಯಿ ಬಿಡುವ ದಿನ

ಮೇಲೇರುತಿದೆ ಉರಿ ಬಿಸಿಲು
ಕಾಲ್ಕೆಳಗೆ ಸುಡು ಕಲ್ನಾರು
ಮರ ಒಣಗಿದರೇನು
ಗಿಡ ಚಿಗುರಿದರೇನು

ಇಂದಿನ ಹಸಿವು ತಣಿಸಬೇಕು
ಮಕ್ಕಳ ನಾಳೆ ಸುಗಮವಾಗಿರಿಸಿರಬೇಕು
ಇದೇ ನನ್ನ ಹಂಬಲ
ಇದಕಾಗೇ ನನ್ನ ಚಿಂತನೆ

ಒಮ್ಮೆ ಕೂಗಿದೆ ನಾನು
ಮಗು ಬೀಳುತಿರಲು,
ಅದ ಹಾಡೆಂದರು
ತಾವು ನಲಿದರು :(

ಹಸಿವಲಿ ನರಳಿದೆ
ಅದನರ್ಥ ಮಾಡಿಕೊಳ್ಳದವರು
ಅದನೂ ಹಾಡೆಂದರು
ಕಥೆ ಕವನ ಕಟ್ಟಿದರು

ಕವಿಯಂತೆ ಮನ ಓಡಿಸಿದರು
ಕಪಿಯಂತೆ ಮರದೆಡೆಗೆ ನೋಟವಿಟ್ಟರು
ನನ್ನಿಂದ ಇನ್ನೂ ಹೆಚ್ಚು ಅಪೇಕ್ಷಿಸಿದರು
ಎನ್ನ ತಿಳಿಯದಾದರು
ತಿಳಿಯಲು ಇಚ್ಛೆಯೂ ಇಲ್ಲದವರು
ತಮ್ಮ ಸಂತಸವೇ ಮಿಗಿಲೆಂದವರು

ನನ್ನಳಲು ನನಗೇ ಗೊತ್ತು
ಮೂಢರಿಗೇನು ತಿಳಿದೀತು!
ನನ್ನ ಸ್ನೇಹಿತೆ ಕಾಗೆಯ
ವೈರಿ ಎಂದರು, ಎನ್ನ ಹೊನ್ನಶೂಲಕೇರಿಸಿದರು

ನಿಮಗೇನು ಗೊತ್ತು? ಹೇಗೆ ತಾನೆ ಗೊತ್ತಾಗಬೇಕು
ನಾನೇನೇ ಉಲಿದರೂ ಹಾಡೆಂದು ಅರ್ಥೈಸುವಿರಿ